ಮುಂದಿನ 2 ದಿನ ರಾಜ್ಯದಲ್ಲಿ 60-100 ಮಿ.ಮೀ ಮಳೆ ಸಾಧ್ಯತೆ: ಪರಿಸ್ಥಿತಿ ಎದುರಿಸಲು ಸಜ್ಜಾಗುತ್ತಿರುವ ಸರ್ಕಾರ

ಸೋಮವಾರ, 18 ಸೆಪ್ಟಂಬರ್ 2017 (13:19 IST)
ಕಳೆದ ಎರಡು ವಾರಗಳಿಂದ ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಉದ್ಯಾನನಗರಿ ಬೆಂಗಳೂರು ಸಹ ಮಳೆಯಿಂದ ತತ್ತರಿಸಿಹೋಗಿದೆ.  ಈ ಮಧ್ಯೆ, ಇನ್ನೂ 2 ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದ್ದು, ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಕಂದಾಯ ಇಲಾಖೆಗೆ ಸರ್ಕಾರ ಸೂಚನೆ ನೀಡಿದೆ.

ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಲೆ ನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ದೇಶಕ ಶ್ರೀನಿವಾಸ ರೆಡ್ಡಿ ಸೂಚಿಸಿದ್ದಾರೆ. 2 ದಿನಗಳಲ್ಲಿ 60ರಿಂದ 100 ಮಿಲಿ ಮೀ ಮಳೆ ಸುರಿಯುವ ಸಾಧ್ಯತೆ ಇದೆ ಎಮದು ಅವರು ತಿಳಿಸಿದ್ದಾರೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲೂ ಮಳೆ ಬೀಳಲಿದೆ.

ಕೊಡಗಿನಲ್ಲಿ ಧೋ ಎಂದು ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ವಿರಾಜಪೇಟೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಳೆ ಹಿನ್ನೆಲೆಯಲ್ಲಿ ಉಂಟಾಗುವ ಸಾವು ನೋವು, ನೆರವಿನ ಉದ್ದೇಶದಿಂದ ಸಿದ್ಧತೆ ಮಾಡಿಕೊಳ್ಳುವಂತೆ ಕಂದಾಯ ಇಲಾಖೆ ಸೂಚನೆ ಹೋಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಕಾಲ್ ಸೆಂಟರ್ ತೆರೆಯಲು ಸಹ ತಿಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ