ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ: ಮೀನುಗಾರಿಗೆ ಎಚ್ಚರಿಕೆ

Sampriya

ಭಾನುವಾರ, 1 ಸೆಪ್ಟಂಬರ್ 2024 (09:57 IST)
Photo Courtesy X
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ.

ಮಲೆನಾಡು ಪ್ರದೇಶವಾದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ.  

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ