ಕೊಡಗಿನಲ್ಲಿ ಆರ್ಭಟಿಸುತ್ತಿರುವ ವರುಣ: ಜನಜೀವನ ಅಸ್ತವ್ಯಸ್ತ

ಸೋಮವಾರ, 22 ಜೂನ್ 2015 (10:47 IST)
ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ತ್ರಿವೇಣಿ ಸಂಗಮ ತುಂಬಿ ಭರ್ತಿಯಾಗಿದೆ. 
 
ಹೌದು, ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕರವಾಗಿ ಮಳೆ ಸುರಿಯುತ್ತಿದೆ. ರಸ್ತೆಗಳು ಪೂರ್ಣ ಪ್ರಮಾಣದಲ್ಲಿ ಜಲಾವೃತಗೊಂಡಿದ್ದು, ಜನರು ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಮೂಲಕ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. 
 
ಇಲ್ಲಿನ ಭಾಗಮಂಡಲ-ನಾಪೋಕ್ಲು ರಸ್ತೆ ಮಾರ್ಗವು ಸಂಪೂರ್ಣವಾಗಿ ಜಲಾವೃತವಾಗಿದ್ದು, ಮಕ್ಕಳು ಹಾಗೂ ಮಹಿಳೆಯರು ಎಲ್ಲಿಗೂ ತೆರಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. 
 
ಇನ್ನು ಸೋಮವಾರಪೇಟೆ ನಗರದ ಅಲ್ಲಲ್ಲಿ ವಿದ್ಯುತ್ ಕಂಬಗಳೂ ಧರೆಗುರುಳಿವೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.  

ವೆಬ್ದುನಿಯಾವನ್ನು ಓದಿ