ಧಾರಾಕಾರ ಮಳೆ: ಕಣಿವೆ ರಾಜ್ಯದಲ್ಲಿ ಪ್ರವಾಹ ಭೀತಿ

ಸೋಮವಾರ, 30 ಮಾರ್ಚ್ 2015 (10:45 IST)
ರಾಷ್ಟ್ರದ ಕಣಿವೆ ರಾಜ್ಯ ಎಂದೇ ಕ್ಯಾತಿ ಪಡೆದಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಹಾಗೂ ಕಣಿವೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 
 
ಕಳೆದ ವರ್ಷದಂತೆಯೇ ಈ ಭಾರಿಯೂ ಕೂಡ ಪ್ರವಾಹ ಉದ್ಭವಿಸುವ ಎಲ್ಲಾ ಲಕ್ಷಣಗಳಿದ್ದು, ಇನ್ನು 6 ದಿನಗಳ ಕಾಲ ಧಾಕಾರಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಥಳೀಯ ಸರ್ಕಾರಗಳ ಎಲ್ಲಾ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಚರಣೆಯನ್ನು ಚುರುಕುಗೊಳಿಸುವಂತೆ  ಸೂಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯು ಭರದಿಂದ ಸಾಗಿದೆ. ಕಾರ್ಯಾಚರಣೆಯಲ್ಲಿ ಡ್ರೋನ್ ಹಾಗೂ ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ. 
 
ಇಲ್ಲಿನ ಝೇಲಂ ನದಿಯು ಅಪಾಯದ ಪ್ರಮಾಣಕ್ಕಿಂತ ಅಧಿಕವಾಗಿ ತುಂಬಿ ಹರಿಯುತ್ತಿದ್ದು, ಜನರು ಭಯಭೀತಗೊಂಡಿದ್ದಾರೆ. ಈಗಾಗಲೇ ಪೂಂಚ್ ಜಿಲ್ಲೆಯ ಕೈಲೆ ಎಂಬ ಗ್ರಾಮದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಇಲ್ಲಿನ ಜನರ ರಕ್ಷಣಾ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಕಳೆದ ಭಾರಿ ಸಂಭವಿಸಿದ್ದ ಪ್ರವಾಹದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. 

ವೆಬ್ದುನಿಯಾವನ್ನು ಓದಿ