ಮುಂದಿನ 5 ದಿನ ಭರ್ಜರಿ ಮಳೆ

ಸೋಮವಾರ, 3 ಜುಲೈ 2023 (14:31 IST)
ನಿಗದಿತ ಅವಧಿಗೂ ಅಂದರೆ 6 ದಿನ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ಆವರಿಸಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಸಹಜವಾಗಿ ಜುಲೈ 8ರ ವೇಳೆಗೆ ಮುಂಗಾರು ಇಡೀ ದೇಶವನ್ನು ವ್ಯಾಪಿಸಬೇಕಿತ್ತು. ಆರು ದಿನಗಳಿಗೂ ಮುಂಚಿತವಾಗಿಯೇ ಭಾನುವಾರದಂದು ಇಡೀ ದೇಶವನ್ನು ಆವರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜಸ್ತಾನ, ಪಂಜಾಬ್‌ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಉತ್ತರ ಪ್ರದೇಶದ ಪೂರ್ವ ಮತ್ತು ಬಿಹಾರದ ದಕ್ಷಿಣ ಭಾಗವನ್ನು ಹೊರತುಪಡಿಸಿ ಮುಂಗಾರು ಸಾಮಾನ್ಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.. ಕರಾವಳಿ ಭಾಗದಲ್ಲಿ ಜುಲೈ 5 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.. ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಗೆ ಜುಲೈ 4, 5, 6ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ