ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ 11 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಅಬ್ಬರ ಇರಲಿದೆ. ಗುಡುಗು, ಗಾಳಿ ಸಹಿತ ಮಳೆಯಾಗಲಿದೆ. ಬೀದರ್ ,ಕಲಬುರ್ಗಿ, ಯಾದಗಿರಿ ,ರಾಯಚೂರು, ಬೆಳಗಾವಿ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಇದೆ.
ನಾಳೆಯಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ , ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 6 ರಿಂದ ರಾಜ್ಯದಾದ್ಯಂತ ಮಳೆ ಕ್ಷೀಣಿಸಲಿದ್ದು, ಅಲರ್ಟ್ ನೀಡಿಲ್ಲ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂದಲ್ಲ ಒಂದು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.