ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ಶುಕ್ರವಾರ, 29 ಜುಲೈ 2016 (11:41 IST)
ಬೆಂಗಳೂರು ನಗರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜುಲೈ ತಿಂಗಳಲ್ಲಿ ಸುರಿದ ದಾಖಲೆ ಮಳೆಯಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 
ಇನ್ನೂ ಮೂರು ದಿನಗಳ ಕಾಲ ಹಗಲು ಹೊತ್ತು ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಯಿಂದ ರಾತ್ರಿಯವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
 
ಬೆಂಗಳೂರಿನ ದೇವನಹಳ್ಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳು ಹಾಗೂ ನೌಕರರು ಪರದಾಡುವಂತಾಗಿದೆ.
 
ಜಯನಗರದ ಆಡಿಗಾಸ್ ಹೊಟೇಲ್, ಶ್ರೀನಿವಾಸ್ ನಗರ, ಡಾ. ರಾಜಕುಮಾರ್ ರಸ್ತೆ, ಇಂದಿರಾ ನಗರ ಹಾಗೂ ಹಲಸೂರು ಗೇಟ್ ಸೇರಿದಂತೆ ಹಲವು ಭಾಗಗಳಲ್ಲಿ 10 ಕ್ಕೂ ಹೆಚ್ಚು ಮರಗಳು ಧರೆಗರುಳಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ