ಬೆಂಗಳೂರಿನಲ್ಲಿ ತಡರಾತ್ರಿ ಮಳೆ ಅಬ್ಬರ: ಕರ್ನಾಟಕದಲ್ಲಿ ಈ ದಿನದವರೆಗೆ ಮಳೆ

Krishnaveni K

ಸೋಮವಾರ, 12 ಆಗಸ್ಟ್ 2024 (09:54 IST)
ಬೆಂಗಳೂರು: ತಡರಾತ್ರಿ ಅಬ್ಬರಿಸಿದ ಮಳೆಯಿಂದಾಗಿ ಬೆಂಗಳೂರಿನಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ ಕೆಲವು ದಿನ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ.

ಸದ್ಯಕ್ಕೆ ಕರಾವಳಿಯಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ನಿನ್ನೆ ಹಗಲಿಡೀ ಸುಡು ಬಿಸಲಿದ್ದರೂ ತಡರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಇದರಿಂದ ಹಲವು ರಸ್ತೆಗಳು ಜಲಾವೃತವಾಗಿದ್ದು, ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆಯಾಗಲಿದೆ. ಇದಲ್ಲದೆ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗಲಿದೆ.

ಕರ್ನಾಟಕದ ಹಲವೆಡೆ ನಾಳೆಯವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಉಷ್ಣಾಂಶ, ಕನಿಷ್ಠ ಉಷ್ಣಾಂಶ 19 ಡಿಗ್ರಿಯಷ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ