ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಭೀಮಾ ತೀರದಲ್ಲಿ ಪ್ರವಾಹ ಭೀತಿ

ಶನಿವಾರ, 2 ಸೆಪ್ಟಂಬರ್ 2017 (11:43 IST)
ಕಲಬುರ್ಗಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಜ್ಜೈನಿ ಡ್ಯಾಂನಲ್ಲಿ ಒಳಹರಿವು ಹೆಚ್ಚಾಗಿದೆ. ಪರಿಣಾಮ ಡ್ಯಾಮ್ ನಿಂದ ಭೀಮಾ ನದಿಗೆ 55 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ.

ಸೊನ್ನ ಬ್ಯಾರೇಜ್ ನಿಂದ 5 ಸಾವಿರ ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಅಫ್ಜಲಪುರ ಮತ್ತು ಜೇವರ್ಗಿ‌ ತಾಲೂಕಿನ ನದಿ ಪಾತ್ರದಲ್ಲಿರುವ ಜನರಿಗೆ ಭೀತಿ ಎದುರಾಗಿದೆ. ನದಿ ಪಾತ್ರದ ಜನರು, ನದಿಯ ಸಮೀಪ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ನದಿ ಸಮೀಪ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಕಲಬುರ್ಗಿ ನೀರಾವರಿ ವಿಭಾಗದ ಮುಖ್ಯ ಅಭಿಯಂತರ ಜಗನ್ನಾಥ್, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಹೆಚ್ಚು ನೀರು ಬಿಡುವ ಸಾಧ್ಯತೆಯಿದೆ. ಉಜ್ಜೈನಿ ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆಯಾದರೆ ಅಫ್ಜಲಪುರ ಹಾಗೂ ಜೇವರ್ಗಿ ತಾಲೂಕಿನ ಸುಮಾರು 30 ಹಳ್ಳಿಗಳು ಜಲಾವೃತಗೊಂಡು ಜನಜೀವನಕ್ಕೆ ತೊಂದರೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ