ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Sampriya

ಶುಕ್ರವಾರ, 19 ಏಪ್ರಿಲ್ 2024 (14:37 IST)
ಬೆಂಗಳೂರು: ಶಿವಮೊಗ್ಗದಲ್ಲಿ ಗುರುವಾರದಿಂದಲೇ ಗಾಳಿ, ಗುಡುಗು ಸಮೇತ ಮಳೆ ಶುರುವಾಗಿದೆ. ಶುಕ್ರವಾರ ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ