ರಾಜ್ಯದ ಹಲವು ಜಿಲ್ಲೆಯಾದ್ಯಂತ ಭಾರಿ ಮಳೆಯ ಅಬ್ಬರ

ಸೋಮವಾರ, 21 ಅಕ್ಟೋಬರ್ 2019 (10:21 IST)
ಬೆಳಗಾವಿ : ರಾಜ್ಯದ ಹಲವು ಜಿಲ್ಲೆಯಾದ್ಯಂತ ಭಾರಿ ಮಳೆಯ ಅಬ್ಬರ ಶುರುವಾಗಿದ್ದು, ಮತ್ತೆ ಪ್ರವಾಹ ಭೀತಿಯಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ.




ಕಳೆದ ರಾತ್ರಿಯಿಂದ ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇನ್ನು ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.


ಹುಬ್ಬಳ್ಳಿಯಲ್ಲಿ ಮಳೆಗೆ ನವೀಲು ತೀರ್ಥ ಡ್ಯಾಂ ನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವ ಹಿನ್ನಲೆಯಲ್ಲಿ ಬೆಣ್ಣೆ  ಹಳ್ಳ ತುಂಬಿ ಹರಿಯುತ್ತಿದ್ದು, ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಿನಲ್ಲಿ  ಪ್ರವಾಹ ಭೀತಿ ಎದುರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ