ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ

ಶುಕ್ರವಾರ, 14 ಅಕ್ಟೋಬರ್ 2022 (15:35 IST)
ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ತಿಂಗಳ ಆರಂಭದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಿಂದ 13 ಜನರು ಸಾವನ್ನಪ್ಪಿದ್ದಾರೆ. ಜಾನುವಾರುಗಳು ಮತ್ತು ಆಸ್ತಿಗಳಿಗೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 2 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ