ಉಡುಪಿಯಲ್ಲಿ ಭಾರೀ ಮಳೆ; ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಂದ ಸೂಚನೆ
ಭಾನುವಾರ, 20 ಸೆಪ್ಟಂಬರ್ 2020 (11:32 IST)
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಈಗಾಗಲೇ SDRF ತಂಡದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದು, 300ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. NDRF ತಂಡದಿಂದಲೂ ರಕ್ಷಣಾ ಕಾರ್ಯ ನಡೆಯುತ್ತಿದೆ. ಜಿಲ್ಲಾಡಳಿತ ಮುಂಗಾಗ್ರತಾ ಕ್ರಮ ಕೈಗೊಂಡಿದೆ. ಈ ಬಗ್ಗೆ ಕಂದಾಯ ಸಚಿವರ ಜೊತೆಗೂ ಚರ್ಚೆಮಾಡಲಾಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.