ಬೆಂಗಳೂರು ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಯಲಹಂಕ, ಜಕ್ಕೂರು ವ್ಯಾಪ್ತಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇನ್ನೂ, ಎರಡು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಸದ್ಯ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸುರಿದ ಮಳೆ ಪ್ರಮಾಣದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದ್ದು ಚೌಡೇಶ್ವರಿ ವಾರ್ಡ್ನಲ್ಲಿ 21.50 ಮಿಮೀ ಮಳೆಯಾಗಿದೆ. ಶನಿವಾರ ರಾತ್ರಿ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿರುವುದಾಗಿ ತಿಳಿಸಿದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಯಚೂರು ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಭಾನುವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇನ್ನು, ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಮಳೆಯಿಲ್ಲದೆ ಬರದ ಭೀತಿಯಲ್ಲಿದ್ದ ರೈತರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.