ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿ ವಿವಿಧೆಡೆ ಮಳೆಯಾಗಲಿದೆ.. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.