ರಾಜ್ಯದ ಹಲವೆಡೆ ಇಂದು ಕೂಡ ಭಾರಿ ಮಳೆಯಾಗುವ ಸಾಧ್ಯತೆ
ಬೆಂಗಳೂರಿನಲ್ಲಿಯೂ ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ.ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಹಾವೇರಿ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿಯಲ್ಲಿ 40–55 ಕಿ.ಮೀ.ಯಿಂದ 65 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವ ಇದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..