25ರ ವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ

Sampriya

ಬುಧವಾರ, 21 ಆಗಸ್ಟ್ 2024 (21:56 IST)
ಬೆಂಗಳೂರು: ನಾಳೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಅದರಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ.

ಇನ್ನೂ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಹವಾಮಾನ ಇಲಾಖೆ ಪ್ರಕಾರ ಇದೇ 25ರವರೆಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಂಭವವಿದೆ. ಶುಕ್ರವಾರದಿಂದ ಮೂರು ದಿನಗಳು ಉಡುಪಿ, ದಕ್ಷಿಣ ಕನ್ನಡದ ಜತೆಗೆ ಉತ್ತರ ಕನ್ನಡ ಜಿಲ್ಲೆಗೂ 'ಯೆಲ್ಲೊ ಅಲರ್ಟ್' ನೀಡಲಾಗಿದೆ.

ಮುಂದಿನ ಐದು ದಿನಗಳು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ

ಕಳೆದ ಎರಡು ವಾರಗಳ ಹಿಂದೆ ಕರಾವಳಿ ಭಾರೀ ಮಳೆಯಾಗಿ, ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿ ಹಾನಿಯಾಗಿತ್ತು. ಅದಾದ ನಂತರ ಸಾಧಾರಣ ಮಳೆಯಾಗುತ್ತಿದ್ದು, ಇದೀದ ಮತ್ತೇ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ