ರಾಜ್ಯದ ವಿವಿಧೆಡೆ ಧಾರಾಕಾರ ಮಳೆ

ಮಂಗಳವಾರ, 3 ಜುಲೈ 2018 (16:31 IST)
ದಕ್ಷಿಣ ಕನ್ನಡ ಜಿಲ್ಲೆ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ .ಈಗಾಗಲೇ  ಭಾರತೀಯ ಹವಾಮಾನ ಇಲಾಖೆ  ರಾಜ್ಯದ ಕರಾವಳಿ ಯಲ್ಲಿ ನಾಳೆಯಿಂದ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. 
 
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆ ಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ .ಉತ್ತರ ಹಾಗೂ ದಕ್ಷಿಣ ಒಳ ನಾಡಿ ನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ .
 
ಭಾರಿ ಮಳೆ ಆಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಢಳಿತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಲ್ಲಾ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದೆ .ಕಡಲ ಹಾಗೂ ನದಿ ತೀರದ ಜನರಿಗೆ ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಕೇರಳ ಹಾಗು ಲಕ್ಷದ್ವೀಪ ದಲ್ಲೂ ಭಾರಿ ಮಳೆ ಆಗುವ ಮುನ್ಸೂಚನೆ ಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 1630 ಮಿಲಿ ಮೀಟರ್ ಮಳೆಯಾಗಿದ್ದು ಇದು ಕಳೆದ ಕೆಲವು ವರ್ಷಗಳ ಬಳಿಕ ಸುರಿದ ಗರಿಷ್ಠ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕ್ ನಲ್ಲಿ ಗರಿಷ್ಠ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗುರುವಾಯನ ಕೆರೆ ಧರ್ಮಸ್ಥಳ ಉಜಿರೆ ಮುಂತಾದ ಕಡೆ ಉತ್ತಮ ಮಳೆಯಾಗುತ್ತಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ