ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ ಹಾಗೂ ನಾಳೆ ಆರಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ನಾಳೆ ಆರೆಂಜ್ ನೀಡಲಾಗಿದ್ದು, ಮೈಸೂರು, ಮಂಡ್ಯ, ಚಾಮರಾಜ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆ ಯೆಲ್ಲೋ ಅಲರ್ಜಿಂಗ್ ಬಳ್ಳಾರಿ ಮತ್ತು ಚಿತ್ರದುರ್ಗವನ್ನು ತೆಗೆದುಹಾಕಿ ಎಲ್ಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಅಕ್ಟೋಬರ್ 6) ರಂದು ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.