ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮೂರು ದಿನ ಭಾರಿ ಮಳೆ

ಶನಿವಾರ, 6 ನವೆಂಬರ್ 2021 (20:30 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ಕಳೆದ ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತ ವ್ಯಸ್ಥ ಗೊಂಡಿತು. ನಗರದ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ ಎಂದಿದೆ.
 
ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಸಹ ಇದೆ ಎಂದು ಹೇಳಿದೆ 
 
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ:
 
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳಯುಂಟಾಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
 
ಮೀನುಗಾರರಿಗೆ ಎಚ್ಚರಿಕೆ:
 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
 
ಶೀತಗಾಳಿಯ ಅನುಭವ:
 
ರಾಜ್ಯದಲ್ಲಿ ಚಳಿಗಾಲ ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ ಎಂದು ಮಾಹಿತಿ ನೀಡಿದೆ.
 
ಬೆಂಗಳೂರಿನಲ್ಲಿ ವರುಣನ ರುದ್ರಾನರ್ತನ:
 
ರಾತ್ರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಹೊರಗೆ ಬಂದಿದ್ದ ಜನ ಮಳೆಯಲ್ಲಿ ಸಿಲುಕಿದರು. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ವಾಹನ ಸವಾರರು ಫೈಓವರ್ ಕೆಳಗೆ ಆಶ್ರಯ ಪಡೆದಿದ್ದರು. 
 
ಗುರುವಾರ ರಾತ್ರಿ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದು ಬರುವ ದೃಶ್ಯ ಕಂಡು ಬಂದಿತ್ತು. ಇದೇ ಪರಿಸ್ಥಿತಿ ಶುಕ್ರವಾರವೂ ಮುಂದುವರಿದಿತ್ತು. ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ರಾಜಾಜಿ ನಗರ, ಮತ್ತಿಕೆರೆ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ