ಅ. 17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಶುಕ್ರವಾರ, 15 ಅಕ್ಟೋಬರ್ 2021 (22:00 IST)
ಬೆಂಗಳೂರು: ಅ. 17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಶನಿವಾರ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ:
ಬೆ. ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ