ಬೆಂಗಳೂರಲ್ಲಿ ಭಾರಿ ಮಳೆ: ಹಲವೆಡೆ ಮರಗಳು ಧರಾಶಾಹಿ, ಸಂಚಾರ ಅಸ್ತವ್ಯಸ್ತ

ಸೋಮವಾರ, 20 ಸೆಪ್ಟಂಬರ್ 2021 (20:18 IST)
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಮರಗಳು ನೆಲಕ್ಕುರುಳಿವೆ. ನಗರದ ಹಲವೆಡೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುವಂತಾಯಿತು.ಮಧ್ಯಾಹ್ನ 1.30ರ ಬಳಿಕ ಭಾರಿ ಮಳೆ ಪ್ರಾರಂಭವಾಗಿ ಸಂಜೆಯವರೆಗೆ ಸುರಿಯುವ ಸಾಧ್ಯತೆ ಇದೆ. 
 
ಹಲವೆಡೆ ಮಳೆ:
 
ನಗರದ ಆರ್.ಆರ್. ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.
 
ಪ್ರಮುಖ ರಸ್ತೆಗಳಲ್ಲಿ ನೀರು: 
 
ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡು ಬಂದಿದೆ
tree

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ