ದ.ಕನ್ನಡದಲ್ಲಿ ಭಾರೀ ಮಳೆ: ಪಿಯು ಸೇರಿದಂತೆ ಶಾಲಾಗೆ ರಜೆ

Sampriya

ಗುರುವಾರ, 27 ಜೂನ್ 2024 (20:01 IST)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನ ಸುರಿಯುತ್ತಿರುವ ಮಳೆಗೆ 7 ಮಂದಿ ಬಲಿಯಾಗಿದ್ದಾರೆ. ಇದೀಗ ಮುಂಜಾಗೃತ ಕ್ರಮವಾಗಿ  ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ನಾಳೆ ರೆಡ್  ಅಲರ್ಟ್‌ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಈ ಸಂಬಂಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅದರಂತೆ ಜಿಲ್ಲೆಯ ಅಂಗನವಾಡಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ  ಪ್ರಾಥಮಿಕ ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.


ಇನ್ನೂ ಮುಂಜಾಗೃತ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ.  ಇನ್ನೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇನ್ನೂ ಕಳೆದ ಎರಡು ದಿನಗಳಿಂದ ಬಿಡುವು ಕೊಡದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ