ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿ

ಶನಿವಾರ, 3 ಆಗಸ್ಟ್ 2019 (10:19 IST)
ಬೆಂಗಳೂರು : ಮಹಾರಾಷ್ಟ್ರದಲ್ಲಿ ಆಗುತ್ತಿರುವ ಮಹಾಮಳೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.




ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದು ಇದು  ಉತ್ತರ ಕರ್ನಾಟಕದ  ಮೇಲೆ ಬಾರೀ ಪರಿಣಾಮ ಬೀರಿದ್ದು, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ನದಿ ಬಳಿಯಿರುವ ಗ್ರಾಮಗಳು, ಜಮೀನುಗಳು ಜಲಾವೃತವಾಗಿವೆ. ಸೇತುವೆಗಳು ಮುಳುಗಡೆಯಾಗಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ.


ಹಾಗೇ ಮಹಾರಾಷ್ಟ್ರದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕೊಯ್ನಾ ಡ್ಯಾಂ ಬಳಿ ಲಘು ಭೂಕಂಪನ ಸಂಭವಿಸಿದ್ದು, ಇದರಿಂದ ಡ್ಯಾಂಗೆ ಧಕ್ಕೆಯಾಗಿ ಕರ್ನಾಟಕಕ್ಕೆ ಏಕಾಏಕಿ ಹೆಚ್ಚುವರಿ ನೀರು ಹರಿದರೆ ರಾಜ್ಯದಲ್ಲಿ ಪ್ರವಾಹ ಸೃಷ್ಟಿಯಾಗುವ ಸಂಭವವಿರುವುದರಿಂದ ಚಿಕ್ಕೋಡಿ ತಾಲೂಕಿನ ನದಿಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ