ರಾಜ್ಯದ ಹಲವೆಡೆ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ
ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯ ಅಬ್ಬರ ಜೋರಾಗಿದ್ದು, ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಮೆಕ್ಕೆಜೋಳ, ಹತ್ತಿ, ತೊಗರಿ , ಕಬ್ಬು ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬಾಗಲಕೋಟೆಯಲ್ಲಿ ಮಹಾಮಳೆಯಿಂದ 1500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.