ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಸಾಧ್ಯತೆ

ಭಾನುವಾರ, 3 ಅಕ್ಟೋಬರ್ 2021 (16:21 IST)
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಭಾನುವಾರ ಮತ್ತು ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಯಿನ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. 
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ