ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ; ಹಲವೆಡೆ ಯೆಲ್ಲೋ ಅಲರ್ಟ್

ಭಾನುವಾರ, 26 ಸೆಪ್ಟಂಬರ್ 2021 (21:18 IST)
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಸೆ. 28ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ