ಹೆಬ್ಬಾಳ್ಕರ್​ ಕಾರು ಅಪಘಾತ: ಅಜಾಗರೂಕತೆ ಚಾಲನೆಗಾಗಿ ಚಾಲಕನ ವಿರುದ್ಧ ಎಫ್‌ಐಆರ್‌

Sampriya

ಮಂಗಳವಾರ, 14 ಜನವರಿ 2025 (18:03 IST)
Photo Courtesy X
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್​ ಗಾಯಗಳಾಗಿವೆ.

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಗನ್​ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ ಕಾರು ಚಾಲಕ ಜಿ.ಶಿವಪ್ರಸಾದ್ ವಿರುದ್ಧ ಕಿತ್ತೂರು ಠಾಣೆಯಲ್ಲಿ 281, 125ಎ, 125ಬಿ ಅಡಿ ಪ್ರಕರಣ ದಾಖಲಾಗಿದೆ.

ಜೀವಕ್ಕೆ ಕುತ್ತು ತುರುವ ಹಾಗೂ ನಿಷ್ಕಾಳಜಿ ವಾಹನ ಚಾಲನೆ, ಅಜಾಗರುತೆಯಿಂದ ವಾಹನ ಚಾಲನೆ ಕಲಂಗಳಲ್ಲಿ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾರು ಚಾಲಕನ ಹೇಳಿಕೆ ದಾಖಲಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.

ಕಿತ್ತೂರು ಠಾಣೆ ಸಿಪಿಐ ಮತ್ತು ಪಿಎಸ್ಐ ಅಪಘಾತ ನಡೆದ ಸ್ಥಳಕ್ಕೆ ಸ್ಥಳಕ್ಕೆ ಭೇಟಿ ನೀಡಿದ್ದು, ನಾಯಿ ಅಡ್ಡ ಬಂದಿದ್ದಕ್ಕೆ ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಆಯ್ತಾ? ಅಥವಾ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ಯಾ ಎನ್ನುವ ಪರಿಶೀಲನೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ