ಪ್ರಾರ್ಥನೆ ಮುಗಿಸಿ ತರಗತಿ ಪ್ರವೇಶಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ಶಾಲೆಗೆ ರಜೆ ಘೋಷಣೆ

Sampriya

ಮಂಗಳವಾರ, 18 ಫೆಬ್ರವರಿ 2025 (15:26 IST)
Photo Courtesy X
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ  ನಡೆಸಿದ ಘಟನೆ ಇಂದು ನಡೆದಿದೆ.

ಇದರಿಂದ ಸುಮಾರು 15 ಮಕ್ಕಳು ಅಸ್ವಸ್ಥರಾಗಿದ್ದು , ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಬೆಳಿಗ್ಗಿನ ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ಏಕಾಏಕಿ ದಾಳಿ ನಡೆಸಿದೆ.

ಈ ವೆಳೆ ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು, ಈ ಮಧ್ಯೆ ಹಲವರಿಗೆ ಹೆಜ್ಜೇನುಗಳು ಕಚ್ಚಿವೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ.  

ಸುರಕ್ಷತಾ ದೃಷ್ಠಿಯಿಂದ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ ಸುತ್ತಾಡುತ್ತಿದ್ದು, ಸ್ಥಳೀಯರು ಬೆಂಕಿ ಹೊಗೆ ಹಾಕಿ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ