ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರಿಗಾಗಿ ಸಹಾಯವಾಣಿ ಸ್ಥಾಪನೆ

Krishnaveni K

ಸೋಮವಾರ, 6 ಮೇ 2024 (09:24 IST)
ಬೆಂಗಳೂರು: ಹಾಸನದಲ್ಲಿ ಪ್ರಜ್ವಲ್ ರೇವಣ್ಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ದೂರು ನೀಡಲು ಅನುಕೂಲವಾಗುವಂತೆ ವಿಶೇಷ ಸಹಾಯವಾಣಿ ತೆರೆಯಲಾಗಿದೆ.

ಪ್ರಜ್ವಲ್ ರೇವಣ್ಣರಿಂದ ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವಾಗಿದೆ. ಆದರೆ ಅವರು ಯಾರೂ ದೂರು ಕೊಡಲು ಮುಂದೆ ಬರುತ್ತಿಲ್ಲ. ಕೆಲವರು ಎಸ್ಐಟಿ ಮನವೊಲಿಕೆಗೂ ಬಗ್ಗುತ್ತಿಲ್ಲ. ಇದರಿಂದ ಪ್ರಕರಣದ ವಿಚಾರಣೆಗೆ ತೊಂದರೆಯಾಗುತ್ತಿದೆ. ಕೇಸ್ ಬಲಗೊಳ್ಳಬೇಕಾದರೆ ಈ ಮಹಿಳೆಯರು ಮುಂದೆ ಬಂದು ದೂರು ನೀಡಲೇಬೇಕಿದೆ. ಹೀಗಾಗಿ ವಿಶೇಷ ಸಹಾಯವಾಣಿ ತೆರೆಯಲಾಗಿದೆ.

ನೇರವಾಗಿ ದೂರು ನೀಡಲು ಬಯಸದ ಮಹಿಳೆಯರು ಸಹಾಯವಾಣಿ ಮೂಲಕ ಅಥವಾ ತಮ್ಮ ಆಪ್ತರ ಮೂಲಕ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಇದರಿಂದ ಮಹಿಳೆಯರು ಧೈರ್ಯ ಮಾಡಿ ದೂರು ನೀಡಬಹುದು ಎಂಬ ನಿರೀಕ್ಷೆಯಿದೆ. ಈಗಾಗಲೇ ಎಸ್ ಐಟಿ ಮೂರು ತಂಡಗಳಾಗಿ ಕಾರ್ಯನಿರ್ವಹಿಸುತ್ತಿದೆ.

ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ