ನ 26ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ‌

Sampriya

ಭಾನುವಾರ, 24 ನವೆಂಬರ್ 2024 (15:03 IST)
Photo Courtesy X
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಜೆಎಂಎಂ ನಾಯಕ ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ.

ಹೇಮಂತ್ ಸೊರೆನ್ ಅವರ ಜೆಎಂಎಂ ನೇತೃತ್ವದ ಮೈತ್ರಿಕೂಟ ಶನಿವಾರ ಜಾರ್ಖಂಡ್‌ನಲ್ಲಿ 81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಂಡಿದೆ.

ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ, ಜಾರ್ಖಂಡ್ ಅಸೆಂಬ್ಲಿ ಚುನಾವಣೆಯಲ್ಲಿ ಇಂಡಿಯಾ ಬಣದ ಸಾಧನೆಯನ್ನು ಸೊರೆನ್ ಅವರು "ಪ್ರಜಾಪ್ರಭುತ್ವದ ಪರೀಕ್ಷೆಯಲ್ಲಿ ಉತ್ತೀರ್ಣ" ಎಂದು ಬಣ್ಣಿಸಿದರು.

"ಈ ಅದ್ಭುತ ಪ್ರದರ್ಶನಕ್ಕಾಗಿ ನಾನು ಜನರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ" ಎಂದು ಅವರು ಹೇಳಿದರು.
ಪತಿಯ ಬಂಧನದ ನಂತರ ಜೆಎಂಎಂ ಅನ್ನು ಪುನಶ್ಚೇತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೋರೆನ್ ಅವರ ಪತ್ನಿ ಕಲ್ಪನಾ ಅವರು 17,142 ಮತಗಳ ಅಂತರದಿಂದ ಬಿಜೆಪಿಯ ಮುನಿಯಾ ದೇವಿ ಅವರನ್ನು ಸೋಲಿಸಿ ಗಂಡೆಯಿಂದ ಗೆದ್ದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ