ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಈ ವಸ್ತುಗಳಿಗೆ ನಿಷೇಧ

Sampriya

ಮಂಗಳವಾರ, 3 ಸೆಪ್ಟಂಬರ್ 2024 (16:56 IST)
Photo Courtesy X
ಮೈಸೂರು: ಚಾಮುಂಡೇಶ್ವರಿ ದರ್ಶನ್ ಪಡೆದ ಸಿಎಂ ಸಿದ್ದರಾಮಯ್ಯ ಅವರು ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ಹಾಗೂ ದರ್ಶನದ ವೇಳೆ ಮೊಬೈಲ್​ ನಿಷೇಧಿಸಲಾಗಿದೆ ಎಂದು ಘೋಷಿಸಿದರು.

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡೇಶ್ವರಿ ದರ್ಶನದ ವೇಳೆ ಮೊಬೈಲ್​ ನಿಷೇಧ ಮಾಡಲಾಗಿದೆ ಎಂದರು.

ಚಾಮುಂಡಿ ಬೆಟ್ಟದಲ್ಲಿ ಮಾತ್ರವಲ್ಲದೇ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಬೆಟ್ಟದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ