ಹಾಸಬಾಂಬೆ ದರ್ಶನದ ಇತಿಹಾಸದಲ್ಲೇ ದಾಖಲೆ ಪ್ರಮಾಣ ಆದಾಯ, ಹುಂಡಿ ಎಣಿಕೆ ಡೀಟೆಲ್ಸ್ ಇಲ್ಲಿದೆ

Sampriya

ಸೋಮವಾರ, 4 ನವೆಂಬರ್ 2024 (18:41 IST)
Photo Courtesy X
ಹಾಸನ: ವರ್ಷದಲ್ಲಿ 9ದಿನಗಳ ಕಾಲ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವ ಹಾಸನಾಂಬೆ ದೇವಿ ಉತ್ಸವ ನಿನ್ನೆ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬರೋಬ್ಬರಿ 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆಯುವ ಮೂಲಕ ದಾಖಲೆಯಾಗಿದೆ.

ಇದೀಗ ದೇವಸ್ಥಾನದಲ್ಲಿ ಹುಂಡಿ ಹಣ ಬಿಟ್ಟು ಕೇವಲ ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ₹9.69 ಕೋಟಿಯಷ್ಟು ಆದಾಯ ಸಂಗ್ರಹವಾಗಿದೆ. ಒಟ್ಟು 9ದಿನಗಳ ಕಾಲ ಹಾಸನಾಂಬೆ ದರ್ಶನ ವೇಳೆ 12,63,83,808 ಆದಾಯ ಸಂಗ್ರಹವಾಗುವ ಮೂಲಕ ಇಷ್ಟೊಂದು ಪ್ರಮಾಣದ ಆದಾಯ ಹಾಸನಾಂಬೆ ದರ್ಶನದ ಇತಿಹಾಸದಲ್ಲೇ ದಾಖಲೆಯಾಗಿದೆ. ಇದರ ಜೊತೆಗೆ 51 ಗ್ರಾಂ ಚಿನ್ನ ಹಾಗೂ 913 ಗ್ರಾಂ ಬೆಳ್ಳಿ ಕಾಣಿಕೆಯಾಗಿದೆ ಬಂದಿದೆ.

ಮೊದಲ ಬಾರಿ ಹಾಸನಾಂಬೆ ದೇವಿಯ ಹುಂಡಿಯಲ್ಲಿ ಇಷ್ಟು ಪ್ರಮಾಣದಲ್ಲಿ ಆದಾಯ ದಾಖಲಾಗಿದೆ. ಈ ವರ್ಷದ ಹಾಸನಾಂಬೆಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ. ಮುಂದಿನ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಅಂದ್ರೆ 15 ದಿನಗಳ ಕಾಲ ಹಾಸನಾಂಬೆ ಉತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ