ಮೊಣಕಾಲು ಶಸ್ತ್ರಚಿಕಿತ್ಸೆಗೂ ಮೊದಲು ಆ ನಂತರದ ಜೀವನದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದಕ್ಕೆ ಚಾಲನೆ ನೀಡಿ ಮಾತನಾಡಿದ ಆರ್ಥೋಪೆಡಿಕ್ಸ್ ವಿಭಾಗದ ಡಾ. ನಾರಾಯಣ್ ಹಲ್ಸ್, ವಯಸ್ಸಾದ ಬಳಿಕ ಅತಿ ಮೊಣಕಾಲು ನೋವು ಸಾಮಾನ್ಯ. ಆದರೆ, ಈ ನೋವು ಹೆಚ್ಚಾದರೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಲೇ ಬೇಕು. ಇಂಥ ಶಸ್ತ್ರಚಿಕಿತ್ಸೆಗೆ ಒಳಗಾಗಿ ನಂತರ ತಮ್ಮ ನೋವು ರಹಿತ ಜೀವನ ನಡೆಸುವುದು ಅತ್ಯಂತ ಸಂತಸ ನೀಡುತ್ತದೆ. ಅದರ ಅನುಭವ ಹಂಚಿಕೊಳ್ಳಲು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದವರು ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸ ನೀಡಿದೆ ಎಂದರು.