ಬೆಂಗಳೂರು : ಯಲಹಂಕದ ಲಕ್ಸುರಿ ಥಾಯ್ ಸ್ಪಾ ಎಂಬ ಹೆಸರಿನ ಸ್ಪಾಸೆಂಟರ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಯಲಹಂಕ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ತಾಣವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯವಾಟಿಕೆ ನಡೆಸುತ್ತಿದ್ದ ಏಳು ಮಂದಿ ಥಾಯ್ಲೆಂಡ್ ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.