ಹೈಫೈ ದರೋಡೆ ಪ್ಲಾನ್

ಮಂಗಳವಾರ, 22 ಫೆಬ್ರವರಿ 2022 (18:21 IST)
ಬೆಂಗಳೂರಿನಲ್ಲಿ ದರೋಡೆ ಮಾಡಲು ಯತ್ನಿಸುತ್ತಿದ್ದ ಹೈಫೈ ಕಳ್ಳರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿ ಸಿದ್ದಾರೆ. ಉಮೇಶ್ ಜೋಶಿ, ಅಮರ್ ರಾಜ್, ಬಂಧಿತ ಆರೋಪಿಗಳಾಗಿದ್ದು, ನಗರದಲ್ಲಿ ಕಳ್ಳತನಕ್ಕೆ ಇಳಿದಿದ್ದ ವೇಳೆ, ಖಚಿತ ಮಾಹಿತಿ ಆಧರಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 3 ಲಕ್ಷ ಮೌಲ್ಯದ 7 ಬೈಕ್ ಗಳನ್ನು ವಶಪಡಿ ಸಿಕೊಂಡಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೇ ಈ ಆರೋ ಪಿಗಳು ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ