ಭಾರೀ ಮಳೆ ಸಾಧ್ಯತೆ: ರಾಜ್ಯದ 6 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ

ಗುರುವಾರ, 26 ಆಗಸ್ಟ್ 2021 (18:54 IST)
ಅರಬ್ಬಿಸಮುದ್ರದ ಆಗ್ನೇಯ ಭಾಗದ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವ ಅರಬ್ಬಿಸಮುದ್ರದ ಕರ್ನಾಟಕ ಕೇರಳದ ಕರಾವಳಿಯಲ್ಲಿ ಕಡಿಮೆ ಒತ್ತ
ಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪರಿಣಾಮ ಆ.29ಮತ್ತು 30ರಂದು ಆರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
 
ಆ.30ರವರೆಗೆ ಕರಾವಳಿ ಹಾಗೂ ದಕ್ಷಿಿಣ ಒಳನಡಿನಲ್ಲಿ ವ್ಯಾಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿಿನ ನಿರೀಕ್ಷೆಯಿದೆ.
 
ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಹಾಗೂ ಅತಿಭಾರಿ ಮಳೆಯನ್ನು ನಿರೀಕ್ಷಿಸಿದ್ದು, ಆ.27 ಮತ್ತು 28ರಂದು ಯೆಲ್ಲೋ ಅಲರ್ಟ್ ಹಾಗೂ ಆ.29 ಮತ್ತು 30ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
 
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಾಂಶ 29 ಹಾಗೂ ಕನಿಷ್ಠ ಉಷ್ಣಾಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
 
ನೈರುತ್ಯ ಮುಂಗಾರು ಗುರುವಾರ ರಾಜ್ಯದಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ.
 
ಮುಖ್ಯವಾಗಿ ಬೀದರ್, ಉತ್ತರ ಕನ್ನಡದ ಭಟ್ಕಳ, ಕಲಬುರ್ಗಿಯ ಕಮಲಾಪುರದಲ್ಲಿ ತಲಾ 5 ಸೆಂ.ಮೀ., ಉತ್ತರ ಕನ್ನಡದ ಗೋಕರ್ಣದಲ್ಲಿ 3 ಸೆಂ.ಮೀ., ಬೀದರ್‌ನ ಸೈಗಾಂವ್, ಆಗುಂಬೆ, ಕೃಷ್ಣರಾಜಪೇಟೆ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ 2 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ