ಉಗ್ರರು ನುಸುಳಿರುವ ಶಂಕೆ ಹಿನ್ನೆಲೆ; ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ

ಶನಿವಾರ, 17 ಆಗಸ್ಟ್ 2019 (12:05 IST)
ಬೆಂಗಳೂರು : ಉಗ್ರರು ನುಸುಳಿರುವ ಶಂಕೆ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲಾ ಕಡೆ ಮಿಲಿಟರಿ ಸೆಕ್ಯೂರಿಟಿ ಒದಗಿಸಲಾಗಿದೆ.
ಬೆಂಗಳೂರಿನ ಮೇಲೆ ಕೂಡ ಉಗ್ರರ ಕರಿನೆರಳು ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಗುಪ್ತಚರ ಇಲಾಖೆಯನ್ನ ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಮುನ್ನೆಚ್ಚರಿಕೆಗಾಗಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಮೆಜೆಸ್ಟಿಕ್, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಟೈಟ್ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ.


ವಿಧಾನಸೌಧಕ್ಕೂ ಕೂಡ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‍ ಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ವಿಧಾನಸೌಧದ ಒಳಗೆ ಹೋಗುವವರ ತಪಾಸಣೆ ಮಾಡಿ ಬಳಿಕ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ