ಬೆಂಗಳೂರು ಉತ್ತರ ವಲಯದ ಸರಕಾರಿ ಪ್ರಥಮಿಕ ಶಾಲೆಯ ನೂತನ ಕಟ್ಟದ ಉದ್ಘಾಟಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಿರೀಕ್ಷೆಗೂ ಮೀರಿ ಕೆಲವು ಬೆಳವಣಿಗೆ ನಡೆಯುತ್ತಿವೆ. ನಾವ್ಯಾರು ಕಣ್ಮುಚ್ಚಿ ಕೂರುವುದಕ್ಕೆ ಸಾಧ್ಯವಿಲ್ಲ. ಈ ಕುರಿತು ನಾಳೆ ನಡೆಯುವ ರಾಜ್ಯ ಕಾರ್ಯಕಾರಣಿಗಳ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು.
ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪಕ್ಷದ ಹಿರಿಯ ನಾಯಕರಾದ ಅವರು, ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ವೈಯಕ್ತಿಕ ವಿಷಯಗಳನ್ನು ಬದಿಗಿಟ್ಟು ಪಕ್ಷದ ಕೆಲಸದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.
ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರ......
ವಿ.ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರ ಮಾಧ್ಯಮಗಳಿಂದ ಗೊತ್ತಾಯ್ತು. ಈ ಕುರಿತು ಇಂದು ಸೋಮಣ್ಣ ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.