ಸಚಿವ ಡಿ.ಕೆ.ಶಿ ಗೆ ಹೊಸ ಜವಾಬ್ದಾರಿ ನೀಡಿದ ಹೈಕಮಾಂಡ್!
ಶನಿವಾರ, 24 ನವೆಂಬರ್ 2018 (16:09 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ನ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸುಲಲಿತವಾಗಿ ಸರಕಾರ ಮುನ್ನಡೆಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ರಾಜ್ಯದಲ್ಲಿನ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಪಸ್ವರಕ್ಕೆ ಆಸ್ಪದ ನೀಡದಂತೆ ಉಭಯ ಪಕ್ಷಗಳ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರಕ್ಕೆ ಯಾವುದೇ ರೀತಿಯ ಆಪತ್ತು ಬರದಂತೆ ಸಂಭಾಳಿಸುವ ಜವಾಬ್ದಾರಿಯನ್ನು ಪ್ರಭಾವಿ ಸಚಿವರೆಂದೇ ಗುರುತಿಸಿಕೊಂಡಿರುವ ಡಿ . ಕೆ ಶಿವಕುಮಾರ್ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್ ವಹಿಸಿದೆ .
` ಟ್ರಬಲ್ ಶೂಟರ್ ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆಯುಂಟಾಗದಂತೆ ನೋಡಿಕೊಳ್ಳಬೇಕು . ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಉಭಯ ಪಕ್ಷಗಳ ಸಚಿವರು , ಶಾಸಕರಲ್ಲಿ ಅಸಮಾಧಾನವುಂಟಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೈಕಮಾಂಡ್ ಕಿವಿಮಾತು ಹೇಳಿದೆ .
ತೆಂಲಗಾಣ ರಾಜ್ಯ ವಿಧಾನಸಭೆಯ ಚುನಾವಣಾ ಪ್ರಚಾರಕ್ಕಾಗಿ ಆ ರಾಜ್ಯಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಶಿವಕುಮಾರ್ ರವರಿಗೆ ಸೂಚ್ಯವಾಗಿ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ .
ಆ್ಯಪ್ನಲ್ಲಿ ವೀಕ್ಷಿಸಿ x