ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌, ಸಿಎಂ ಸಿದ್ದರಾಮಯ್ಯಗೆ ತಾತ್ಕಲಿಕ ರಿಲೀಫ್

Sampriya

ಗುರುವಾರ, 12 ಸೆಪ್ಟಂಬರ್ 2024 (19:13 IST)
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಸುದೀರ್ಘವಾಗಿ ನಡೆಯಿತು.  ಹೈಕೊರ್ಟ್‌ನಲ್ಲಿ ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಮಂಡನೆ ಮಾಡಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ಸಿದ್ದರಾಮಯ್ಯಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ.

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಆದೇಶ ಬರುವವರೆಗೂ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅದೇ ಟೆನ್ಷನ್ ಮುಂದುವರೆಯಲಿದೆ. ಪ್ರಬಲ ವಾದ ಪ್ರತಿವಾದ ಆಳಿಸಿ ಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

ಅಂತಿಮ ಆದೇಶ ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಕೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ