ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ರಿಲೀಫ್
ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ಬಿಎಸ್‌ವೈ ಅವರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ಶನಿವಾರ ಅವರು ಕೋರ್ಟ್‍ಗೆ ಖುದ್ದು ಹಾಜರಾಗುವುದರಿಂದ ರಿಲೀಫ್ ಪಡೆದಿದ್ದಾರೆ. ಖುದ್ದು ವಿಚಾರಣೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಬಿಎಸ್‍ವೈ ಅರ್ಜಿಯ ವಿವರವಾದ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.