ನಗರದ ಪಾರ್ಕ್ ನಲ್ಲಿ ಈಜುಕೊಳ, ಜಿಮ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ

ಗುರುವಾರ, 14 ಜುಲೈ 2022 (15:07 IST)
ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಕಾಶ್ ನಗರದ ವಾರ್ಡ್ ಸಂಖ್ಯೆ 98ರ ಗಾಯತ್ರಿ ಪಾರ್ಕ್‌ನಲ್ಲಿ ಈಜುಕೊಳ, ಮಲ್ಟಿ ಜಿಮ್ ನಿರ್ಮಾಣ ಮಾಡಬಾರದು' ಎಂದು ಹೈಕೋರ್ಟ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿರ್ಬಂಧ ವಿಧಿಸಿದೆ.
ಪ್ರಕಾಶ್ ನಗರದ ನಿವಾಸಿಗಳಾದ ಜೆ. ಶ್ರೀನಿವಾಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
 
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.‌ಮೋಹನ್, 'ಕರ್ನಾಟಕ ಉದ್ಯಾನ, ಆಟದ ಮೈದಾನಗಳು, ತೆರೆದ ಸ್ಥಳಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆಯ ಕಲಂ 8 ಹಾಗೂ 1985ರ ಅಧಿನಿಯಮದ ನಿಯಮ 6ರ ಅನ್ವಯ ಪಾರ್ಕ್‌ಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧವಿದೆ' ಎಂಬ ಅಂಶವನ್ನು ನ್ಯಾಯಪೀಠಕ್ಕೆ ವಿವರಿಸಿದರು.
 
ಇದನ್ನು ಮಾನ್ಯ ಮಾಡಿದ ನ್ಯಾಯ ಪೀಠ, ಗಾಯತ್ರಿದೇವಿ ಪಾರ್ಕ್‌ ನಲ್ಲಿ ಉದ್ದೇಶಿತ ಈಜುಕೊಳ, ಮಲ್ಟಿ ಜಿಮ್ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿ ಆದೇಶಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ