ಕೊಲ್ಲೂರು ಮೂಕಾಂಬಿಕಾ ಪ್ರತಿಷ್ಠಾನ ಕಾರ್ಯಕ್ರಮಕ್ಕೆ ಶ್ರೀಗಳನ್ನು ಆಹ್ವಾನಿಸದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಘವೇಂದ್ರ ಶ್ರೀಗಳ ಭಕ್ತರೋರ್ವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಿದ್ದು, ಸರ್ಕಾರದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ಪ್ರಕರಣದ ಹಿನ್ನೆಲೆ: ಕೊಲ್ಲೂರು ಮೂಕಾಂಬಿಕಾ ಪ್ರತಿಷ್ಠಾನ ಕಾರ್ಯಕ್ರಮದ ಆಯೋಜನೆ ಹಿನ್ನೆಲೆಯಲ್ಲಿ ಸರ್ಕಾರವು ಜಿಲ್ಲಾಧಿಕಾರಿಗಳ ವರದಿಯನ್ನಾಧರಿಸಿ ಕಳೆದ ಮೇ 15ರಂದು ಸರ್ಕಾರಿ ಆದೇಶವನ್ನು ಹೊರಡಿಸಿದ್ದು, ಕಾರ್ಯಕ್ರಮವನ್ನು 2006ಕ್ಕೂ ಹಿಂದೆ ನಡೆಸುತ್ತಿದ್ದ ಪದ್ಧತಿಯನ್ನೇ ಅನುಸರಿಸಿಕೊಂಡು ನಡೆಸಲಿ ಎಂದು ಆದೇಶ ಹೊರಡಿಸಿತ್ತು.
ಬಳಿಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಶ್ರೀಗಳ ಭಕ್ತ ಕಾಂತರಾಜ್ ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದು, ಕೋರ್ಟ್ ಕೂಡ 2006ಕ್ಕೂ ಹಿಂದಿದ್ದ ಪದ್ಧತಿಯನ್ನೇ ಮುಂದುವರಿಸುವಂತೆ ಆದೇಶಿಸಿದೆ. ಆದ್ದರಿಂದ ಅರ್ಜಿದಾರ ಕಾಂತರಾಜ್ ತಾವು ಸ್ಲಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.