ಟಿಪ್ಪು ಜಯಂತಿ ಆಚರಣೆಗೆ ತಡೆನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಟಿಪ್ಪು ಜಯಂತಿ ಆಚರಣೆ ನಡೆಸದಂತೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಆದೇಶವಿದೆಯಾ? ಜಯಂತಿ ಆಚರಣೆ ಕಾನೂನಿಗೆ ವಿರೋಧವಾಗಿದ್ದರೆ ಮಾತ್ರ ಹೈಕೋರ್ಟ್ ಮಧ್ಯಪ್ರವೇಶಿಸುತ್ತದೆ ಎಂದು ಸ್ಪಷ್ಟಪಡಿಸಿದೆ.
ರಾಜ್ಯ ಸರಕಾರ ಆಚರಿಸುತ್ತಿರುವ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಕಾನೂನಿನ ವಿರೋಧವಿಲ್ಲವಾದ್ದರಿಂದ ತಡೆ ನೀಡಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ದೂರುದಾರರ ಅರ್ಜಿಯನ್ನು ತಳ್ಳಿಹಾಕಿದೆ.
ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಸಕಲ ಸಿದ್ದತೆ ನಡೆಸಿದ್ದರೆ ಬಿಜೆಪಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.