ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್, ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸಿಎಂ (ಬಸವರಾಜ ಬೊಮ್ಮಾಯಿ ಅವಧಿ) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದರು.