ಚುನಾವಣೆ ದಿನಾಂಕ ಘೋಷಿಸದಂತೆ ರಾಜ್ಯ ಚುನಾವಣೆ ಆಯೋಗಕ್ಕೆ ಹೈಕೋರ್ಟ್ ಆದೇಶ

ಸೋಮವಾರ, 20 ಏಪ್ರಿಲ್ 2015 (14:31 IST)
ಬೆಂಗಳೂರು ಮಹಾನಾಗರ ಪಾಲಿಕೆಯ ಚುನಾವಣೆ ದಿನಾಂಕ ಘೋಷಿಸದಂತೆ ಹೈಕೋರ್ಟ್‌ನ ವಿಭಾಗೀಯ ಪೀಠ ಚುನಾವಣೆ ಆಯೋಗಕ್ಕೆ ಆದೇಶ ನೀಡಿದೆ.

ದಿನಾಂಕ 22ರ ವರೆಗೆ ಬಿಬಿಎಂಪಿ ಚುನಾವಣೆ ದಿನಾಂಕವನ್ನು ಘೋಷಿಸದಂತೆ ಕೋರ್ಟ್ ಚುನಾವಣೆ ಆಯೋಗಕ್ಕೆ ಆದೇಶ ನೀಡಿದೆ. ಸುಮಾರು ಎರಡು ಗಂಟೆಗಳ ಕಾಲ ನಡೆದ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ 80 ಲಕ್ಷಕ್ಕೂ ಹೆಚ್ಚು ಜನರಿದ್ದು ಅಡಳಿತ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಂಗಡಿಸುವುದು ಅನಿವಾರ್ಯವಾಗಿದೆ ಎಂದು ಸರಕಾರದ ಪರ ವಕೀಲರು ಕೋರ್ಟ್‌ ಮುಂದೆ ವಾದ ಮಂಡಿಸಿದ್ದರು.

ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಕಾಂಗ್ರೆಸ್ ಪಕ್ಷ ಸಂಚು ರೂಪಿಸಿದೆ. ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡುವುದು ಬೇಡ ಎಂದು ಬಿಬಿಎಂಪಿ ಸದಸ್ಯರ ಪರ ವಕೀಲರು ಪ್ರತಿವಾದ ಮಂಡಿಸಿದರು.

ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ಏಪ್ರಿಲ್ 22 ರಂದು ಮತ್ತೆ ವಿಚಾರಣೆ ನಡೆಸಲು ತೀರ್ಮಾನಿಸಿ ಆದೇಶ ಹೊರಡಿಸಿತು.  

ವೆಬ್ದುನಿಯಾವನ್ನು ಓದಿ