ಬೆಂಗಳೂರು : ಸಂಸದ ಸ್ಥಾನದಿಂದ ಪುತ್ರ ಪ್ರಜ್ವಲ್ ರೇವಣ್ಣ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಶಾಸಕ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ವಿಧಾನಸಭಾ ಕಾರ್ಯದರ್ಶಿ ಮೂಲಕ ಸಮನ್ಸ್ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಈ ಆದೇಶ ಬಂದಿದೆ.
ಚುನಾವಣಾ ಅಕ್ರಮ ವಿಚಾರವಾಗಿ ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದರು. ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ದೇವರಾಜೇಗೌಡ ಪರಾಜಿತಗೊಂಡಿದ್ದರು. ರೇವಣ್ಣ ಸೇರಿದಂತೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರಿಗೂ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಈಚೆಗೆ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಈ ಪ್ರಕರಣದ ಬೆನ್ನಲ್ಲೇ ಈಗ ಪ್ರಜ್ವಲ್ ತಂದೆ ಹೆಚ್.ಡಿ. ರೇವಣ್ಣ ಅವರಿಗೆ ಸಮನ್ಸ್ ನೀಡಿದೆ.