ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆ ಹೈಕೋರ್ಟ್ ಎಚ್ಚರಿಕೆ ಆದೇಶ

ಶುಕ್ರವಾರ, 1 ಸೆಪ್ಟಂಬರ್ 2023 (14:43 IST)
ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆಯ ಆದೇಶ ನೀಡಿದೆ.

ಸೌಜನ್ಯ ಅತ್ಯಾಚಾರ, ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ಸಭೆ, ಪ್ರತಿಭಟನೆಗಳು ನಡೆಯುತ್ತಿದೆ. ಈ ವೇಳೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. 

ಶ್ರೀ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಬಗ್ಗೆ ಸಾಕಷ್ಟು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಹಲವು ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿದೆ. ಆದರೂ ಹೇಳಿಕೆಗಳನ್ನು ಮುಂದುವರಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ