ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತೀರ್ಮಾನವೇ ಅಂತಿಮ: ಜಿ.ಪರಮೇಶ್ವರ್

ಗುರುವಾರ, 20 ಏಪ್ರಿಲ್ 2017 (13:58 IST)
ಮುಂದಿನ 2018ರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ವಿಧಾನಸಭೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪ್ರತಿಯೊಂದು ಜಿಲ್ಲೆಗೆ ವೀಕ್ಷಕರ ತಂಡಗಳನ್ನು ರಚಿಸಲಾಗಿದ್ದು, ವೀಕ್ಷಕರ ತಂಡ ನೀಡುವ ವರದಿಯನ್ನು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿದ್ದಾರೆ. ಒಂದು ವೇಳೆ, ಹೈಕಮಾಂಡ್ ನನಗೆ ಹೊಣೆ ನೀಡಿದಲ್ಲಿ ಮುಂದಿನ ಬಾರಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ. ಬೇರೆಯವರಿಗೆ ನೀಡಿದರೂ ಸಂತೋಷವಾಗುತ್ತದೆ ಎಂದರು.
 
ಕಾರಿನ ಮೇಲಿರುವ ಕೆಂಪು ಗೂಟದ ಕುರಿತಂತೆ ಸ್ಪಷ್ಟನೆ ನೀಡಿದ ಅವರು, ಕೇಂದ್ರ ಸರಕಾರದ ಆದೇಶವನ್ನು ಪ್ರತಿಯೊಬ್ಬರು ಪಾಲಿಸಬೇಕಾಗುತ್ತದೆ. ಬೆಂಗಳೂರಿನಲ್ಲಿಯೇ ಕೆಂಪು ಲೈಟ್ ತೆಗೆಯಬೇಕಾಗಿತ್ತು. ಆದರೆ. ಚಿಕ್ಕಮಗಳೂರಿನಲ್ಲಿ ತೆಗೆದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ